ಮಾಜಿ ಸೈನಿಕರಿಗೆ ಅಗತ್ಯ ಸೌಲಭ್ಯ ಒದಗಿಸಿ

080922 Shamsundhar Ex Army Raichur
ಶ್ಯಾಮಸುಂದರ್ ಎಕ್ಸ್ ಆರ್ಮಿ.
Published on

ರಾಯಚೂರು: ದೇಶಕ್ಕಾಗಿ ಸೇವೆ ಸಲ್ಲಿಸಿದ ಮಾಜಿ ಸೈನಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಸೆ.12 ಮತ್ತು 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಮಸುಂದರ್ ಗದ್ವಾಲ್ ತಿಳಿಸಿದರು.

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಾಜಿ ಸೈನಿಕರು ತಮಗೆ ಸಿಗಬೇಕಾದ ಸೌಲಭ್ಯಗಳಿಗಾಗಿ ಕಚೇರಿಗೆ ಅಲೆದಾಡುವಂತಾಗಿದೆ. ಈ ಬಗ್ಗೆ ಹಲವು ಬಾರಿ ಸರ್ಕಾರದ ಗಮನ ಸೆಳೆದರೂ ಸ್ಪಂದನೆ ದೊರೆತಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಜಿಲ್ಲೆಯಲ್ಲಿ 180ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮಾಜಿ ಸೈನಿಕರಿದ್ದಾರೆ. ಬಹಳಷ್ಟು ಜನ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿ ಹಲವು ವರ್ಷಗಳಾದರೂ ಮಂಜೂರು ಮಾಡುತ್ತಿಲ್ಲ. ಆರ್‌ಟಿಪಿಎಸ್, ವೈಟಿಪಿಎಸ್ ಸೇರಿ ಹಲವು ಸಂಸ್ಥೆಗಳಲ್ಲಿ ಭದ್ರತಾ ವಿಭಾಗದಲ್ಲಿ ನೇಮಕಕ್ಕೆ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net