ನ್ಯಾಯಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನಾಳೆ

N Bhanuraj Raichur
ಎನ್.ಭಾನುರಾಜ, ವಕೀಲರ ಸಂಘದ ಅಧ್ಯಕ್ಷ, ರಾಯಚೂರು.
Published on

ರಾಯಚೂರು: ನಗರದ ಹಳೇ ಜಿಲ್ಲಾಸ್ಪತ್ರೆ ಸ್ಥಳದಲ್ಲಿ ಡಿ.10ರಂದು ಮಧ್ಯಾಹ್ನ 3.30ಕ್ಕೆ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಎನ್.ಭಾನುರಾಜ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು. ನ್ಯಾಯಾಲಯ ಸಂಕೀರ್ಣದಲ್ಲಿಯೇ ಕಂದಾಯ, ನೋಂದಣಿ ಇಲಾಖೆ ಕಚೇರಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗಿದೆ. ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಕೀರ್ಣ ನಿರ್ಮಾಣದಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದರು.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಳೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ.ಅರುಣ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಡಾ.ಶಿವರಾಜ ಪಾಟೀಲ್ ಪಾಲ್ಗೊಳ್ಳಲಿದ್ದಾರೆ ಎಂದು ಭಾನುರಾಜ ತಿಳಿಸಿದರು. ಪದಾಧಿಕಾರಿಗಳಾದ ಉದಯಕುಮಾರ, ಎನ್.ಶಿವಶಂಕರ, ಜೀತೇಂದ್ರ, ಬಿ.ಎನ್.ನಾಯಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net