ಸರಳ ರೀತಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ

Ambigara Choudayya
Published on

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜ.21ರಂದು ಆಚರಿಸಲಾಗುವ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಮೆರವಣಿಗೆ ಹಾಗೂ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಗಂಗಾಮತಸ್ಥ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಶಾಂತಪ್ಪ ತಿಳಿಸಿದರು.

ನಗರದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಚೌಡಯ್ಯ ಮೂರ್ತಿಗೆ ಸಮಾಜದ ಜನರೊಂದಿಗೆ ಪೂಜೆ ಸಲ್ಲಿಸಿ ಸರಳ ರೀತಿಯಲ್ಲಿ ಆಚರಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜಯಂತಿಯನ್ನು ಪ್ರತಿವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಕಳೆದೆರಡು ವರ್ಷಗಳಿಂದ ಕರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಜಯಂತಿ ನಿಮಿತ್ತ ನಡೆಸಲಾಗುತ್ತಿದ್ದ ಭಾವಚಿತ್ರ ಮೆರವಣಿಗೆ ಹಾಗೂ ಕಾರ್ಯಕ್ರಮವನ್ನು ಕೈಬಿಡಲಾಗುತ್ತಿದೆ. ಸಮಾಜದ ಜನರು ಗುಂಪು ಗುಂಪಾಗಿ ಸೇರದೆ ಮನೆಯಲ್ಲಿಯೇ ಜಯಂತಿ ಆಚರಿಸಬೇಕು. ಅಧಿಕಾರಿಗಳು ಮತ್ತು ಆಯ್ದ ಸಮಾಜದ ಮುಖಂಡರು ಮಾತ್ರ ಪೂಜೆಯಲ್ಲಿ ಭಾಗವಹಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು. ಸಮಾಜದ ಮುಖಂಡರಾದ ಕೆ.ಶರಣಪ್ಪ, ಶರಣಪ್ಪ ಪೂಜಾರಿ, ನರಸಿಂಹಲು, ನರಸಪ್ಪ ಆಲ್ವಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net