ತಾಲೂಕಿನಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಿ: ಗ್ರಾಮೀಣ ಶಾಸಕ ಬಸನಗೌಡ ದದ್ದಲ್

oplus_2
oplus_2
Published on

ತಾಲೂಕು ತ್ರೈಮಾಸಿಕ ಕೆಡಿಪಿ ಸಭೆ

ರಾಯಚೂರು: ತಾಲೂಕಿನಲ್ಲಿ ಸರ್ಕಾರ ಯೋಜನೆಗಳ ಅನುಷ್ಠಾನ, ತೊಡಕುಗಳು ಹಾಗೂ ಪ್ರಗತಿಯ ಪರಿಶೀಲನೆಗಾಗಿ ಕೆಡಿಪಿ ಸಭೆಯನ್ನು ನಡೆಸಲಾಗುತ್ತದೆ. ಕಡ್ಡಾಯವಾಗಿ ಎಲ್ಲ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು. ಇಂದು ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ, ಸರ್ಕಾರಕ್ಕೆ ಮಾಹಿತಿ ಸಲ್ಲಿಸುವಂತೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.

ಅಕಾಲಿಕ ಮಳೆಯಿಂದಾಗಿ ತಾಲೂಕಿನ ಹಲವೆಡೆ ಬೆಳೆಹಾನಿಯಾಗಿದ್ದು, ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ, ಸಮೀಕ್ಷೆ ಕೈಗೊಂಡು ವರದಿ ಸಿದ್ದಪಡಿಸಿಕೊಳ್ಳುವಂತೆ ತಿಳಿಸಿದರು.

ಭತ್ತ ಬೆಳೆದ ರೈತರಿಗೆ ಅನುಕೂಲವಾಗುವಂತೆ ತಾಲೂಕು ಕೇಂದ್ರಗಳಲ್ಲಿ ಕೂಡಲೇ ಭತ್ತ ಖರೀದಿ ಕೇಂದ್ರ ಸ್ಥಾಪನೆ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ತಾಲೂಕಿನಲ್ಲಿ ರೈತ ಸಂಪರ್ಕ ಕೇಂದ್ರಗಳ ಸ್ಥಪನೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಈಗಾಗಲೇ ಸಿದ್ಧಗೊಂಡಿರುವ ರೈತ ಸಂಪರ್ಕ ಕೇಂದ್ರಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ರೈತರಿಗೆ ಕೇಂದ್ರಗಳಿಂದ ಉತ್ತಮ ಮಾಹಿತಿಗಳನ್ನು ಮತ್ತು ಯೋಜನೆಗಳ್ಳನ್ನು ತಲುಪಿಸಬೇಕು ಎಂದರು.

ಇದೇ ವೇಳೆ ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಮಾತನಾಡಿ, ಹತ್ತಿ ಬೆಳೆಯ ಬೆಲೆ ಏರಿಕೆಯಾಗದಂತೆ ಅಧಿಕಾರಿಗಳು ಮತ್ತು ವರ್ತಕರು ಒಪ್ಪಂದ ಮಾಡಿಕೊಂಡಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಆರ್‌ಎಪಿಎಂಪಿಸಿಎಸ್ ಅಧ್ಯಕ್ಷ ಜಯಂತರಾವ್ ಪತಂಗೆ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪವನ್ ಪಾಟೀಲ್, ಎಸಿ ಗಜಾನನ ಬಾಲೆ, ತಹಸೀಲ್ದಾರ್ ಸುರೇಶ ವರ್ಮಾ, ತಾಲೂಕು ಪಂಚಾಯತ್ ಇಒ ಚಂದ್ರಶೇಖರ ಪವಾರ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net