ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಅಗತ್ಯ: ಅರುಣಾ ಹಿರೆಮಠ

sankritika sourabha
Published on

ರಾಯಚೂರು: ಪೂರ್ವಜರ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಉಪನ್ಯಾಸಕಿ ಅರುಣಾ ಹಿರೇಮಠ ಹೇಳಿದರು.

ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಮುಖಾಮುಖಿ ರಂಗಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸೌರಭ ಸಂಗೀತ ಮತ್ತು ನೃತ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೇಕ್ಷಕರ ಕೊರತೆ ಕಂಡುಬರುತ್ತಿದ್ದು, ಕಲೆ ಸಂಸ್ಕೃತಿ ಬೆಲೆಯಲು ಪ್ರೇಕ್ಷಕರ ಪ್ರೊತ್ಸಹ ಅತ್ಯಗತ್ಯವಾಗಿದೆ. ಕಲೆ ಸಾಂಸ್ಕೃತಿಕ ಉಳಿಸುವ ನಿಟ್ಟಿನಲ್ಲಿ ಮುಖಾಮುಖಿ ರಂಗ ಸಂಸ್ಥೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ರಂಗಭೂಮಿ ಕಲಾವಿದ ವಿ.ಎನ್.ಅಕ್ಕಿ, ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕಿ ಸರಿತಾ ಮಹೇಶ, ರಂಗ ನಿರ್ದೇಶಕ ಲಕ್ಷ್ಮಣ ಮಂಡಲಗೇರಾ, ಪ್ರಮುಖರಾದ ಹನುಮಂತು, ಶಿವರಾಜ, ವೇಣುಗೋಪಾಲ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net