ದಲಿತ ವಿರೋಧಿ ಕಾಂಗ್ರೆಸ್: ಶಾಸಕ ಡಾ.ಶಿವರಾಜ್ ಪಾಟೀಲ್ ವಾಗ್ದಾಳಿ

oplus_2
oplus_2
Published on

ರಾಯಚೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ರದ್ದುಪಡಿಸುವಂತೆ ಹೇಳಿಕೆ ನೀಡುವ ಮೂಲಕ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧೀ ಅಸಲಿ ಮುಖವನ್ನು ತೋರಿಸಿದ್ದಾರೆ ಎಂದು ನಗರ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶಿವರಾಜ್ ಪಾಟೀಲ್ ಹೇಳಿದರು.

ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಎಸ್.ಸಿ, ಎಸ್.ಟಿ ಮೋರ್ಚಾದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಬುಧವಾರ ಮಾತನಾಡಿ, ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ರದ್ದುಪಡಿಸಬೇಕೆಂಬ ಹೇಳಿಕೆಯನ್ನು ನೀಡುವ ಮೂಲಕ ಕಾಂಗ್ರೆಸ್ ತಾನು ದಲಿತ ವಿರೋಧಿ ಎಂದು ತೋರಿಸುತ್ತಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಸುಳ್ಳು ಪ್ರಚಾರ ಗಿಟ್ಟಿಸಿಕೊಂಡು 30 ಸೀಟುಗಳನ್ನು ಪಡೆದುಕೊಂಡಿತ್ತು. ನಂತರ ದಲಿತರನ್ನು ವಿರೋಧಿಸುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗಿದೆ. ಮುಂದಿನ ಚುನಾವಣೆಗಳಲ್ಲಿ ದಲಿತರು ಕಾಂಗ್ರೆಸ್ ಪಕ್ಷಕ್ಕೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಇತ್ತೀಚೆಗೆ ಸಿಎಂ ಸಚಿವ ಸಂಪುಟ ಸಭೆ ನಡೆಸಿ ಯೋಜನೆಗಳಿಗೆ ಅನುದಾನ ನೀಡುವುದಾಗಿ ಹೇಳಿದ್ದು, ಖಜಾನೆ ಖಾಲಿ ಮಾಡಿಕೊಂಡಿರುವ ಕಾಂಗ್ರೆಸ್ ರಾಜ್ಯ ಸರ್ಕಾರ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂದರು.

ಇದೇ ವೇಳೆ ಎಸ್‌ಸಿ, ಎಸ್‌ಟಿ ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿರುವ ರಾಹುಲ್ ಗಾಂಧೀ ಭಾವಚಿತ್ರದ ಅಣಕು ಶವ ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಪ್ರಮುಖರಾದ ಪ್ರತಾಪ್‌ಗೌಡ ಪಾಟೀಲ್, ಗಂಗಾಧರ ನಾಯಕ್, ವೈ ಗೋಪಾಲರೆಡ್ಡಿ, ಯಲ್ಲಪ್ಪ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net