ದಲಿತರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಬಾಲಸ್ವಾಮಿ ಕೊಡ್ಲಿ ಒತ್ತಾಯ

080322 Balaswamy Kodli Madiga Mahasabha Raichur
ರಾಯಚೂರು ಜಿಲ್ಲೆ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಬಾಲಸ್ವಾಮಿ ಕೊಡ್ಲಿ.
Published on

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ರಾಮತ್ನಾಳ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಬೇಕು. ಈ ಪ್ರಕರಣದಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಮುದಗಲ್ ಪಿಎಸ್‌ಐ ಡಾಕೇಶನನ್ನು ಸೇವೆಯಿಂದ ವಜಾಗೊಳಿಸುವಂತೆ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಬಾಲಸ್ವಾಮಿ ಕೊಡ್ಲಿ ಒತ್ತಾಯಿಸಿದರು.

ಸವರ್ಣೀಯರು ದಲಿತರ ಕೇರಿಗೆ ನುಗ್ಗಿ ಹಲ್ಲೆ ನಡೆಸಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇದುವರೆಗೂ ಹಲ್ಲೆ ನಡೆಸಿದವರನ್ನು ಬಂಧಿಸಲಾಗಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಗ್ರಾಮದಲ್ಲಿ 12 ದಲಿತ ಕುಟುಂಬಗಳಿದ್ದು, ಮಕ್ಕಳು ಓಡಾಡುತ್ತಿರುವುದರಿಂದ ಮರಂ ಸಾಗಿಸುವ ಟ್ರಾೃಕ್ಟರ್‌ರನ್ನು ನಿಧಾನವಾಗಿ ಚಲಾಯಿಸುವಂತೆ ತಿಳಿಸಿದ್ದಕ್ಕೆ ಒಂದು ಸಮುದಾಯದ 100ಕ್ಕೂ ಹೆಚ್ಚು ಜನರು ನುಗ್ಗಿ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ದಲಿತರು ಭೀತಿಯಿಂದ ಊರು ತೊರೆದಿದ್ದಾರೆ. ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಈಶ್ವರ ವಜ್ಜಲ್ ಪೊಲೀಸರ ಮೇಲೆ ಒತ್ತಡ ಹೇರಿ ಹಲ್ಲೆಗೊಳಗಾದ ದಲಿತರ ಮೇಲೆಯೇ ಕೇಸ್ ದಾಖಲಾಗುವಂತೆ ಮಾಡಿದ್ದಾರೆ. ಸಹಾಯಕ ಆಯುಕ್ತ, ತಹಸೀಲ್ದಾರ್ ಕೂಡ ಇದುವರೆಗೂ ಗ್ರಾಮಕ್ಕೆ ಭೇಟಿ ನೀಡದೆ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು. ಪದಾಧಿಕಾರಿಗಳಾದ ಪಿ.ಯಲ್ಲಪ್ಪ, ಪ್ರೀತಂ ಕೊಡ್ಲಿ, ಸುಭಾಷ, ಭೀಮೇಶ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net