ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ 6ಕ್ಕೆ

MR Bheri
ಎಂ.ಆರ್.ಭೇರಿ
Published on

ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂವಿಧಾನ ವಿರೋಧಿ ಧೋರಣೆ ಖಂಡಿಸಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಒಡ್ಡಲು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿ.6ರಂದು ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಂ.ಆರ್.ಭೇರಿ ತಿಳಿಸಿದರು.

ರಾಜ್ಯದ ದಲಿತ ಸಂಘಟನೆಗಳ ಮುಖಂಡರು, ಪ್ರಗತಿಪರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆಯಿಂದ ನೂರಾರು ಕಾರ್ಯಕರ್ತರು ತೆರಳಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಾಹಿತಿ ಬಾಬು ಭಂಡಾರಿಗಲ್, ಒಕ್ಕೂಟದ ಪದಾಧಿಕಾರಿಗಳಾದ ಭಾಸ್ಕರರಾವ್, ಚಿದಾನಂದ ಅರೋಲಿ, ಹನುಮಂತ ಅರೋಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net