ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ಅಗತ್ಯ; ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿಕೆ

22082021 Raichur DC Visit
Published on

ಆರೋಗ್ಯ ಇಲಾಖೆ ಆಂಬುಲೆನ್ಸ್ ವಿತರಣೆ

ರಾಯಚೂರು: ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಜನರಿಗೆ ಕೊಡುಗೆ ನೀಡುತ್ತಿರುವ ಭಾರತೀಯ ಎಲೆಕ್ಟ್ರಾನಿಕ್ ಕಂಪನಿ ಸೇರಿ ಜಿಲ್ಲೆಯ ಇತರ ಸಂಘ, ಸಂಸ್ಥೆಗಳು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಭಾರತೀಯ ಎಲೆಕ್ಟ್ರಾನಿಕ್ ಕಂಪನಿಯಿಂದ ಜಿಲ್ಲಾಡಳಿತಕ್ಕೆ ನೀಡಿರುವ 10 ಆಂಬುಲೆನ್ಸ್‌ಗಳನ್ನು ಶನಿವಾರ ಲೋಕಾರ್ಪಣೆ ಮಾಡಿ ಮಾತನಾಡಿದರು. ಬೆಲ್ ಕಂಪನಿ ನೂತನ ಆವಿಷ್ಕ್ಕಾರಕ್ಕೆ ಮುನ್ನುಡಿ ಬರೆಯುತ್ತಿದ್ದು, ಈಗಾಗಲೇ ಚುನಾವಣೆ ಸಂದರ್ಭದಲ್ಲಿ ವೋಟಿಂಗ್ ಮಷಿನ್ ನೀಡಿದೆ. ಸಾಮಾಜಿಕ ಕಳಕಳಿಯಿಂದ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡುತ್ತಿರುವ ಕೊಡುಗೆ ಅಪಾರವಾಗಿದೆ ಎಂದರು.

ಭಾರತೀಯ ಎಲೆಕ್ಟ್ರಾನಿಕ್ಸ್ ಕಂಪನಿ ಮಾನವ ಸಂಪನ್ಮೂಲ ಅಧಿಕಾರಿ ಶಿವರಾಮ ಮಾತನಾಡಿ, ಸಾಮಾಜಿಕ ಕಳಕಳಿ ಉದ್ದೇಶದಿಂದಾಗಿ ಬಿ.ಎಲ್ ಸಂಸ್ಥೆ ಸಾಕಷ್ಟು ಅನುದಾನವನ್ನು ದೇಣಿಗೆಯಾಗಿ ನೀಡುತ್ತಿದೆ. ಈ ಹಿಂದೆ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಿತ್ತು. ಇಂದು ಜಿಲ್ಲೆಗೆ 10 ಉತ್ತಮ ಗುಣಮಟ್ಟದ ಆಂಬುಲೆನ್ಸ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net