ಜಿಲ್ಲಾದ್ಯಂತ ಮಡಿವಾಳ ಮಾಚಿದೇವ ಜಯಂತಿ ಆಚರಣೆ

010222 Raichur Madiwala Machideva Jayanti
ರಾಯಚೂರಿನಲ್ಲಿ ಮಡಿವಾಳ ಮಾಚಿದೇವ ಪುತ್ಥಳಿಗೆ ಶಾಸಕ ಡಾ.ಶಿವರಾಜ ಪಾಟೀಲ್ ಮಂಗಳವಾರ ಮಾಲಾರ್ಪಣೆ ಮಾಡಿದರು.
Published on

ರಾಯಚೂರು: ಮಡಿವಾಳ ಮಾಚಿದೇವ ಜಯಂತಿಯನ್ನು ಕರೊನಾ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮಂಗಳವಾರ ಸರಳ ರೀತಿಯಲ್ಲಿ ಆಚರಿಸಲಾಯಿತು. ನಗರದ ಮಡಿವಾಳ ಮಾಚಿದೇವ ವೃತ್ತದಲ್ಲಿರುವ ಪುತ್ಥಳಿಗೆ ಜಿಲ್ಲಾಡಳಿತ ಮತ್ತು ಮಡಿವಾಳ ಸಮುದಾಯದಿಂದ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.

ನಗರ ಶಾಸಕ ಡಾ.ಶಿವರಾಜ ಪಾಟೀಲ್, ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ನಗರಸಭೆ ಅಧ್ಯಕ್ಷ ಇ.ವಿನಯಕುಮಾರ, ಆರ್‌ಡಿಎ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಎಸ್ಪಿ ಬಿ.ನಿಖಿಲ್ ಮಾಚಿದೇವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಮಡಿವಾಳ ಸಮುದಾಯದ ಜಿಲ್ಲಾಧ್ಯಕ್ಷ ಜಂಬಣ್ಣ ಯಕ್ಲಾಸಪುರ, ಪ್ರಮುಖರಾದ ಹುಸೇನಪ್ಪ ಮಟಮಾರಿ, ಜಿ.ಸುರೇಶ, ಜಿ.ಶಿವಮೂರ್ತಿ, ಎ.ಚಂದ್ರಶೇಖರ, ನರಸಪ್ಪ ಯಕ್ಲಾಸಪುರ, ಮುಖಂಡರಾದ ರವೀಂದ್ರ ಜಲ್ದಾರ್, ಬಿ.ಗೋವಿಂದ, ಹರೀಶ ನಾಡಗೌಡ, ಮಂಜುಳಾ ಅಮರೇಶ, ವಿಜಯರಾಜೇಶ್ವರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net