ಕಿರಿಯ ಇಂಜಿನಿಯರ್ ಸೇವೆಯಿಂದ ವಜಾ

Raichur CMC
ರಾಯಚೂರು ನಗರಸಭೆ
Published on

ರಾಯಚೂರು: ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ನಗರಸಭೆಯ ಕಿರಿಯ ಇಂಜಿನಿಯರ್ ಕೃಷ್ಣರನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೋಮವಾರ ಆದೇಶ ಹೊರಡಿಸಿದ್ದಾರೆ.

ಕಲುಷಿತ ನೀರು ಪೂರೈಕೆಯಿಂದ ಜನರು ಅಸ್ವಸ್ಥರಾಗಿರುವ ಕುರಿತು ಕೃಷ್ಣಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ನೋಟಿಸ್‌ಗೆ ಸಮಜಾಯಿಷಿ ನೀಡಿದ್ದ ಕೃಷ್ಣ, ಚರಂಡಿಯಲ್ಲಿ ಪೈಪ್ ಅಳವಡಿಸಿದ್ದು, ಜನರು ತಗ್ಗು ತೋಡಿ ನಳದ ನೀರು ತುಂಬುತ್ತಿರುವುದರಿಂದ ಕಲುಷಿತ ನೀರು ಪೂರೈಕೆಯಾಗಿದೆ ಎಂದು ತಿಳಿಸಿದ್ದರು. ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಕನಿಷ್ಠ ವೇತನ ತಾತ್ಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಕಿರಿಯ ಇಂಜಿನಿಯರ್ ಕೃಷ್ಣರನ್ನು ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಕಾಯ್ದೆ ಅನ್ವಯ ಸೇವೆಯಿಂದ ವಜಾಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net