ಆರ್ಥಿಕ ಪರಿಸ್ಥಿತಿ ಸಮರ್ಥ ನಿರ್ವಹಣೆ, ಶಾಸಕ ಡಾ.ಶಿವರಾಜ ಪಾಟೀಲ್ ಮೆಚ್ಚುಗೆ

260922 Raichur Samudhaya Bhavana Bhoomi Pooja
ರಾಯಚೂರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಡಾ.ಶಿವರಾಜ ಪಾಟೀಲ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
Published on

ರಾಯಚೂರು: ಕರೊನಾದಿಂದಾಗಿ ಜಗತ್ತಿನ ಎಲ್ಲ ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಕಷ್ಟವನ್ನು ಎದುರಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು.

ನಗರದ 13ನೇ ವಾರ್ಡ್‌ನಲ್ಲಿ 50 ಲಕ್ಷ ರೂ. ವೆಚ್ಚದ ಸಮುದಾಯ ಭವನದ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 13ನೇ ವಾರ್ಡ್‌ನಲ್ಲಿ ಶೇ.80 ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಉಳಿದ ಕಾಮಗಾರಿ ಶೀಘ್ರ ಮುಗಿಸಲಾಗುವುದು. ಜನರ ಸಹಕಾರವಿದ್ದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಒದಗಿಸಬಹುದಾಗಿದೆ. ಸಮುದಾಯ ಭವನ ಎಲ್ಲರ ಆಸ್ತಿಯೆಂದು ತಿಳಿದು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net