

ರಾಯಚೂರು: ಎಸ್ಸೆಸ್ಸೆಲ್ಸಿಯಿಂದ ಪದವಿವರೆಗಿನ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ಈಡಿಗ ಸಮಾಜದ ವಿದ್ಯಾರ್ಥಿಗಳಿಗೆ ನಗರದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಫೆ.11ರ ಬೆಳಗ್ಗೆ 11ಕ್ಕೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆ.ಪಿ.ನಾರಾಯಣಸ್ವಾಮಿ ಪ್ರತಿಷ್ಠಾನದ ಗೌರವ ಸಂಚಾಲಕ ಖಾಜನಗೌಡ ಏಗನೂರು ತಿಳಿಸಿದರು.
ವಿಭಾಗವಾರು ವಿದ್ಯಾರ್ಥಿಗಳಿಗೆ 5 ಸಾವಿರ ರೂ.ನಿಂದ 7.50 ಸಾವಿರ ರೂ.ವರೆಗೆ ಪ್ರತಿಷ್ಠಾನದಿಂದ ನೀಡಲಾಗುತ್ತಿದ್ದು, ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿನ ಈಡಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಹೇಳಿದರು.
ರಾಯಚೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಸಮಾಜದ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಪ್ರತಿಷ್ಠಾನದ ಸಂಚಾಲಕರಾದ ಮಂಜುನಾಥ ಹಾನಗಲ್, ಈರಪ್ಪಗೌಡ ಉಪಸ್ಥಿತರಿದ್ದರು.