ಶೈಕ್ಷಣಿಕ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಿ

080922 Raichur SFI Protest
ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿಎಂಗೆ ಬರೆದ ಪತ್ರವನ್ನು ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತ ಕುಮಾರಗೆ ಎಸ್‌ಎಫ್‌ಐನಿಂದ ಗುರುವಾರ ಸಲ್ಲಿಸಲಾಯಿತು.
Published on

ರಾಯಚೂರು: ರಾಜ್ಯದಲ್ಲಿನ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ನಿಂದ ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಯ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತ ಕುಮಾರಗೆ ಮನವಿ ಸಲ್ಲಿಸಲಾಯಿತು.

ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಮಾದರಿ ಶಾಲೆ ನೆಪದಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದ್ದು ಇದನ್ನು ಕೂಡಲೇ ನಿಲ್ಲಿಸಬೇಕು. ಹಾಸ್ಟೆಲ್ ಪ್ರವೇಶಕ್ಕಾಗಿ ನಡೆಸುತ್ತಿರುವ ಕೌನ್ಸೆಲಿಂಗ್ ಕೈಬಿಟ್ಟು, ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವಂತೆ ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net