ಮತದಾನ ಪ್ರಜಾಪ್ರಭುತ್ವದ ಬುನಾದಿ; ಜಿಪಂ ಯೋಜನಾ ನಿರ್ದೇಶಕ ಪಿ.ಎಸ್.ಮಡೋಳಪ್ಪ ಹೇಳಿಕೆ

06122021 RAICHUR VOTERS DAY
Published on


ರಾಯಚೂರು: ವಿಶ್ವದಲ್ಲಿ ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಮತದಾನ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯಾಗಿದೆ. ಮತದಾನದಲ್ಲಿ ಉತ್ತಮ ನಾಯಕನ ಆಯ್ಕೆ ಮಾಡಿ ಸದೃಢ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಪಿ.ಎಸ್.ಮಡೋಳಪ್ಪ ಹೇಳಿದರು.

ಸ್ಥಳೀಯ ಜಿಪಂ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಸೋಮವಾರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿವಿಧ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.

ಪ್ರತಿ ಚುನಾವಣೆಯಲ್ಲೂ ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಅಥವಾ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಚುನಾವಣೆ ಪ್ರಕ್ರಿಯೆಯನ್ನು ತಿಳಿಸುವ ಉದ್ದೇಶದಿಂದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಶಾಲಾ ವಿದ್ಯಾರ್ಥಿಗಳ ಪಾಲಕರಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ತಿಳಿಸಲಾಗುತ್ತಿದೆ. ಕೋವಿಡ್ ಮುಕ್ತ ಜಿಲ್ಲೆಗಾಗಿ ಶಿಕ್ಷಕರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ಪಿಯು ಡಿಡಿಪಿಐ ಸೋಮಶೇಖರ ವಕ್ರಾಣಿ, ವಿಷಯ ಪರಿವೀಕ್ಷಕ ಎಂ.ಎಚ್.ನಾಯಕ, ನೋಡಲ್ ಅಧಿಕಾರಿ ದಂಡಪ್ಪ ಬಿರಾದರ್ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net