ಖಾತ್ರಿ ಮಾನವ ದಿನಗಳನ್ನು ಹೆಚ್ಚಿಸಲು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಒತ್ತಾಯ

03112020 Raichur NAREGA workers protest
Published on

ರಾಯಚೂರು: ಖಾತ್ರಿ ಯೋಜನೆಯ ಮಾನವ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ಪಡಿತರ ವಿತರಣೆಯಲ್ಲಿ ತಲಾ 5 ಕೆ.ಜಿ. ಹೆಚ್ಚಿಗೆ ಆಹಾರಧಾನ್ಯ ನೀಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಲಕ್ಷಾಂತರ ಕಾರ್ಮಿಕರು ಕೆಲಸವಿಲ್ಲದೆ ತಮ್ಮ ಗ್ರಾಮಗಳಿಗೆ ಮರಳಿ ಬಂದಿದ್ದು, ಉದ್ಯೋಗವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಸಾವಿರಾರು ಕುಟುಂಬಗಳು ಈಗಾಗಲೇ ಯೋಜನೆಯಡಿ 100 ದಿನಗಳ ಕೆಲಸವನ್ನು ಮುಗಿಸಿದ್ದು, ಮಾನವ ದಿನಗಳನ್ನು 200 ದಿನಕ್ಕೆ ಹೆಚ್ಚಿಸುವ ಮೂಲಕ ಕೆಲಸ ನೀಡಬೇಕು ಎಂದು ಒತ್ತಾಯಿಸಿದರು.


ಪದಾಧಿಕಾರಿಗಳಾದ ಅಭಯ, ಬಸವರಾಜ, ಗೋವಿಂದ, ಇಮಾನುವೇಲ್, ಮೋಕ್ಷಮ್ಮ, ವಿರುಪಮ್ಮ, ಶರಣಮ್ಮ, ಬಸವರಾಜ ಲಿಂಗಸುಗೂರು ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net