ಜಾರಿ ನಿರ್ದೇಶನಾಲಯದ ದುರ್ಬಳಕೆ ನಿಲ್ಲಲಿ

220722 Protest by Congress in Raichur
ರಾಯಚೂರಿನಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
Published on

ರಾಯಚೂರು: ಜಾರಿ ನಿರ್ದೇಶನಾಲಯದ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ಕೊಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ನೀಡಿ ವಿಚಾರಣೆ ಹೆಸರಿನಲ್ಲಿ ಕಿರುಕುಳ ನೀಡುವ ಕೆಲಸವನ್ನು ಜಾರಿ ನಿರ್ದೇಶನಾಲಯದ ಮೂಲಕ ಕೇಂದ್ರ ಸರ್ಕಾರ ಮಾಡುತ್ತಿದೆ. ಎಫ್‌ಐಆರ್ ದಾಖಲಾಗದಿದ್ದರೂ ಸಂವಿಧಾನಬಾಹಿರವಾಗಿ ವಿಚಾರಣೆ ನಡೆಸಲಾಗುತ್ತಿದೆ. ಪ್ರತಿಪಕ್ಷ ಹಾಗೂ ವಿರೋಧಿಗಳನ್ನು ತನಿಖಾ ಸಂಸ್ಥೆಗಳ ಮೂಲಕ ಬೆದರಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ದೂರಿದರು.

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಜನರ ಗಮನವನ್ನು ಬೇರೆಡೆ ಹರಿಸಲು ಇಂತಹ ಕುತಂತ್ರವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೆ ವಾಮ ಮಾರ್ಗದ ಮೂಲಕ ಇತರ ಪಕ್ಷಗಳ ನಾಯಕರಿಗೆ ಬೆದರಿಸುವ ತಂತ್ರಗಾರಿಕೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net