ಪರಿಸರ ನಮ್ಮೆಲ್ಲರ ಉಸಿರಾಗಿದ್ದು ಸಂರಕ್ಷಿಸಿ ಉಳಿಸಿ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

Raichur DC Office Planting Program
ರಾಯಚೂರಿನ ಡಿಸಿ ಕಚೇರಿ ಆವರಣದಲ್ಲಿ ಅರಣ್ಯ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
Published on

ರಾಯಚೂರು: ಪರಿಸರ ನಮ್ಮೆಲ್ಲರ ಉಸಿರಾಗಿದ್ದು, ಅದನ್ನು ಸಂರಕ್ಷಿಸಿ ಉಳಿಸಿ ಬೆಳೆಸುವ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕರದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು.

ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆಕ್ಸಿಜನ್ ಮಹತ್ವ ಎಷ್ಟು ಎನ್ನುವುದನ್ನು ಕೋವಿಡ್ ನಮಗೆ ಕಲಿಸಿಕೊಟ್ಟಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ಸಸಿ ನೆಟ್ಟು ಪೋಷಿಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದರು.

ಅರಣ್ಯ ಇಲಾಖೆ ಉಪ ವಿಭಾಗೀಯ ಅಧಿಕಾರಿ ಚಂದ್ರಪ್ಪ ಮಾತನಾಡಿ, ಪರಸರ ನಾಶದಿಂದ ಆಗುವ ವಿನಾಶದ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಂಡಿದ್ದೇವೆ. ಗಿಡಗಳನ್ನು ಬೆಳೆಸಿ ನಾಡನ್ನು ಉಳಿಸುವ ಮೂಲಕ ಆಮ್ಲಜನಕ ಕೊರತೆಯುಂಟಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಾಲೂಕು ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ, ಗ್ರೀನ್ ರಾಯಚೂರು ಸಂಸ್ಥೆ ಕಾರ್ಯದರ್ಶಿ ಸರಸ್ವತಿ ಕಿಲಕಿಲೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net