

ರಾಯಚೂರು: ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡುವುದಾಗಿ ಸಿಎಂ ಸಿದ್ದರಾಮಯ್ಯ ಘೊಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಹೈದ್ರಾಬಾದ್ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ್ ನಾಯಕ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ರಾಮಾಯಣದ ಮೂಲಕ ವಾಲ್ಮೀಕಿ ಮಹರ್ಷಿ ಅವರು ಸಮಪಾಲು, ಸಮಬಾಳು ಹಾಗೂ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ಸಿಗಬೇಕೆಂಬ ಸಂದೇಶವನ್ನು ಸಾರಿದವರಾಗಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಹೆಸರನ್ನು ರಾಯಚೂರು ವಿವಿಗೆ ಇಡುವುದಾಗಿ ಸರ್ಕಾರ ಘೋಷಣೆ ಮಾಡಿರುವುದು ಸಂತಸ ವಿಚಾರವಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ ನಾಯಕ, ರಾಮಕೃಷ್ಣ ನಾಯಕ, ರಾಚಣ್ಣ ನಾಯಕ ಸೇರಿದಂತೆ ಇತರರಿದ್ದರು.