ಎಲ್ಲರೂ ಮತದಾನದ ಹಕ್ಕು ಪಡೆಯಿರಿ, ಜಿಪಂ ಸಿಇಒ ಶಶಿಧರ ಕುರೇರ ಸಲಹೆ

091122 Raichur Voter List Revision Awareness Jatha
ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಹಿನ್ನೆಲೆಯಲ್ಲಿ ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಬುಧವಾರ ಮಾನವ ಸರಪಳಿ ರಚಿಸಿದರು.
Published on

ರಾಯಚೂರು: ಅರ್ಹರು ಮತದಾರರ ಪಟ್ಟಿಗೆ ಹೆಸರನ್ನು ಸೇರಿಸುವ ಮೂಲಕ ಪ್ರತಿಯೊಬ್ಬರೂ ಮತದಾನದ ಹಕ್ಕನ್ನು ಪಡೆಯುವಂತಾಗಬೇಕೆಂದು ಜಿಪಂ ಸಿಇಒ ಶಶಿಧರ ಕುರೇರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರ ಜಾಗೃತಿ ಜಾಥಾದಲ್ಲಿ ಮಾತನಾಡಿದರು. ರಾಜ್ಯ ಚುನಾವಣಾ ಆಯೋಗವು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರಡು ಮತದಾರರ ಪಟ್ಟಿ ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಯಾವುದೇ ಲೋಪದೋಷಗಳಿದ್ದರೂ ಅವುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ
ಮಾನ್ವಿ: ಯುವ ಮತದಾರರು ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು 2023 ಜ.1ಕ್ಕೆ 18 ವರ್ಷ ಪೂರ್ತಿಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು ಅರ್ಹ ಯುವ ಮತದಾರರು ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಮತದಾನದ ಹಕ್ಕನ್ನು ಪಡೆಯಿರಿ ಎಂದು ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ಕರೆ ನೀಡಿದರು.
ಪಟ್ಟಣದ ಬಸವ ವೃತ್ತದಿಂದ ಬುಧವಾರ ಪ್ರಮುಖ ವೃತ್ತಗಳ ಮೂಲಕ ಮಾನ್ವಿ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಮತ್ತು ಸೇರ್ಪಡೆಗೆ ತಾಲೂಕು ಆಡಳಿತದಿಂದ ಮಿಂಚಿನ ನೋಂದಣಿ ಅಭಿಯಾನದ ಸೈಕಲ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಆರ್ಹ ಯುವ ಮತದಾರರು ತಮ್ಮ ಹೆಸರು ನೋಂದಾಯಿಸಲು ಮತ್ತು ತಿದ್ದುಪಡಿ ಹಾಗೂ ಹೆಸರನ್ನು ತೆಗೆದು ಹಾಕುವುದು, ವರ್ಗಾವಣೆ ಮಾಡಲು ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ನಮೂನೆ 6ರಲ್ಲಿ ಅರ್ಜಿಗಳ ಸಲ್ಲಿಕೆ ಮತ್ತು ಆನ್‌ಲೈನ್ ಮೂಲಕ ಅವಶ್ಯವಿರುವ ದಾಖಲೆಗಳನ್ನು ಸಲ್ಲಿಸಿ ವಿಶೇಷ ನೋಂದಣಿ ಕಾರ್ಯಕ್ರಮದ ಸದುಪಯೋಗ ಪಡೆಯಬಹುದಾಗಿದೆ ಎಂದರು.

ನ.9ರಿಂದ ಡಿ.12ರವರಗೆ ಮತದಾರರ ಪಟ್ಟಿಗೆ ಸಂಬಂಧಿಸಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹದುದು. ವಿಶೇಷ ಅಭಿಯಾನ ನ.12ರಿಂದ ಡಿ.4 ರವರಗೆ ಇದ್ದು ಅಂತಿಮ ಮತದಾರರ ಪಟ್ಟಿಯನ್ನು 2023 ಜ.1ರಂದು ಪ್ರಕಟಿಸಲಾಗುವುದೆಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಶೀರಸ್ತೇದಾರರಾದ ಚರಣ್‌ಸಿಂಗ್ ರಾಥೋಡ್, ವಿನಾಯಕರಾವ್, ಗ್ರಾಮಲೆಕ್ಕಾಧಿಕಾರಿ ಮಂಜುನಾಥ, ಶಿಕ್ಷಕ ಶ್ರೀಶೈಲ, ಮುಖಂಡರಾದ ಶರಣಯ್ಯಸ್ವಾಮಿ, ವಿ.ಜನಾರ್ದನ್ ಇತರರಿದ್ದರು.

ಮಾನ್ವಿಯ ಬಸವವೃತ್ತದಿಂದ ಮತದಾರರ ಪಟ್ಟಿ ಪರಿಷ್ಕರಣೆ, ನೋಂದಣೆ ಅಭಿಯಾನದ ಸೈಕಲ್ ಜಾಗೃತಿ ಜಾಥಾಕ್ಕೆ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ಚಾಲನೆ ನೀಡಿದರು.
ಮಾನ್ವಿಯ ಬಸವವೃತ್ತದಿಂದ ಮತದಾರರ ಪಟ್ಟಿ ಪರಿಷ್ಕರಣೆ, ನೋಂದಣೆ ಅಭಿಯಾನದ ಸೈಕಲ್ ಜಾಗೃತಿ ಜಾಥಾಕ್ಕೆ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ಚಾಲನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net