ನಕಲಿ ಜಾತಿ ಪ್ರಮಾಣಪತ್ರ ನೀಡದಂತೆ ತಡೆಯೊಡ್ಡಿ

N Raghuveernayak
ಎನ್.ರಘುವೀರ ನಾಯಕ.
Published on

ರಾಯಚೂರು: ಸರ್ಕಾರ ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್ಟಿಗೆ ಸೇರ್ಪಡೆ ಮಾಡಿದ್ದು, ತಳವಾರ ಹಾಗೂ ಪರಿವಾರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆಯುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು. ನಕಲಿ ಜಾತಿ ಪ್ರಮಾಣಪತ್ರ ಪಡೆಯುತ್ತಿರುವ ಕುರಿತು ನಾಯಕ ಸಮುದಾಯದ ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಬೇಕು. ಈ ಮೂಲಕ ನಕಲಿ ಜಾತಿ ಪ್ರಮಾಣಪತ್ರ ಪಡೆಯುವುದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದರು.

ಕೆಲವು ದಿನಗಳಿಂದ ನಕಲಿ ಜಾತಿ ಪ್ರಮಾಣಪತ್ರ ಪಡೆಯುತ್ತಿರುವವರು ಸಂಖ್ಯೆ ಹೆಚ್ಚಿದೆ. ಇದರಿಂದ ನಾಯಕ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಎಸ್ಟಿ ಮೀಸಲಾತಿ ಹೆಚ್ಚಿಸುವುದಾಗಿ ಹೇಳಲಾಗುತ್ತಿದ್ದು, ಅನ್ಯ ಜಾತಿಯವರಿಗೆ ಎಸ್ಟಿ ಪ್ರಮಾಣಪತ್ರ ನೀಡಿದರೆ ಮೀಸಲಾತಿ ಹೆಚ್ಚಳದ ಉಪಯೋಗವಿಲ್ಲದಂತಾಗಲಿದೆ. ಎಸ್ಟಿ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಬೇಕು ಎಂದು ಎನ್.ರಘುವೀರ ನಾಯಕ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net