ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗೆ 5,534 ಅಭ್ಯರ್ಥಿಗಳು ಗೈರು

Raichur FDA Exam Writing
Published on

ರಾಯಚೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಭರ್ತಿಗಾಗಿ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಭಾನುವಾರ ಜರುಗಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 5,534 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.

ಜಿಲ್ಲೆಯ 54 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದು, 16,999 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದರು. ಅದರಲ್ಲಿ 11,465 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 5,534 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ನಡೆಸಿ ಒಳಗೆ ಬಿಡಲಾಗುತ್ತಿತ್ತು. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಎಲ್ಲ ಕೇಂದ್ರಗಳಲ್ಲಿ ಮೊಬೈಲ್ ಜಾಮರ್ ಅಳವಡಿಸಲಾಗಿತ್ತು. ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವ್ಯವಹಾರ ನಡೆಯದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net