ಮೀನು ಸಾಕಣೆದಾರರಿಗೆ ಸೌಲಭ್ಯ ತಲುಪಿಸಿ-ಅಧಿಕಾರಿಗಳಿಗೆ ಡಿಸಿ ಚಂದ್ರಶೇಖರ ನಾಯಕ ಸೂಚನೆ

191222 Raichur Matsru Sampad Yojana District Committee Meeting
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ಸೋಮವಾರ ಪ್ರಧಾನಮಂತ್ರಿ ಮತ್ಸೃ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು.
Published on

ರಾಯಚೂರು: ಪ್ರಧಾನಮಂತ್ರಿ ಮತ್ಸೃ ಸಂಪದ ಯೋಜನೆ ಕುರಿತು ಜನರಿಗೆ ಸೂಕ್ತ ಮಾಹಿತಿಯನ್ನು ನೀಡುವ ಮೂಲಕ ಅರ್ಹ ಫಲಾನುಭವಿಗಳಿಗೆ ಯೋಜನೆಯ ಫಲ ದೊರೆಯುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಧಾನಮಂತ್ರಿ ಮತ್ಸೃ ಸಂಪದ ಯೋಜನೆಯ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಯೋಜನೆಯಡಿ ಮೀನು ಸಾಕಣೆ ಮಾಡುವವರಿಗೆ ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಶೀಘ್ರಗತಿಯಲ್ಲಿ ಮುಟ್ಟಿಸಬೇಕು ಎಂದರು.

ಮೀನುಗಾರಿಕೆ ಇಲಾಖೆಯಿಂದ ಮೀನುಗಳ ಉತ್ಪಾದನೆ, ಹೆಚ್ಚಿನ ನೀರು ಲಭ್ಯವಿರುವ ಕೆರೆಗಳಲ್ಲಿ ಸಾಕಣೆ ಕುರಿತು ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಗೆ ಸೌಲಭ್ಯ ಒದಗಿಸಿ ಅವರಿಗೆ ಅರ್ಥಿಕ ಮಟ್ಟ ಸುಧಾರಿಸಲಾಗುತ್ತಿದೆ. ಐದು ವರ್ಷಗಳವರೆಗೆ ಯೋಜನೆ ಜಾರಿಯಲ್ಲಿರುವುದರಿಂದ ಹೆಚ್ಚಿನ ಪ್ರಚಾರ ನೀಡುವ ಮೂಲಕ ಇನ್ನೆರಡು ವರ್ಷಗಳಲ್ಲಿ ಶೇ.100ರಷ್ಟು ಗುರಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯೋಜನೆ ಕುರಿತು ಪ್ರಚಾರ ಕಾರ್ಯ ನಡೆಸಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು. ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶರಣಬಸವ, ಕೃಷಿ ಇಲಾಖೆ ಅಧಿಕಾರಿ ಸುಧಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net