ಹದಿನಾಲ್ಕು ಜನ ಶ್ರೇಷ್ಠ ಕೃಷಿಕರಿಗೆ ಪ್ರಶಸ್ತಿ

oplus_2
oplus_2
Published on

ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕೃಷಿಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಏಳು ಜನ ಶ್ರೇಷ್ಠ ಕೃಷಿಕ ಹಾಗೂ ಏಳು ಜನ ಶ್ರೇಷ್ಠ ಕೃಷಿ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಪ್ರಶಸ್ತಿಯನ್ನು ವಿತರಿಸಿ ಸನ್ಮಾನಿಸಿದರು. ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಬಸವರಾಜ(ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಕನಕನಾಳಿ), ರಾಮರೆಡ್ಡಿ(ಬೀದರ ಜಿಲ್ಲೆಯ ಔರಾದ ತಾಲೂಕಿನ ಯನಗುಂದಾ), ಚಂದ್ರಗೌಡ(ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಹುಗುಲೂರು), ಶ್ರೀಪಾದರಾಜ(ಕೊಪ್ಪಳ ಜಿಲ್ಲೆಯ ನರಸಾಪುರ), ಮಲ್ಲಿಕಾರ್ಜುನ(ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ), ಕೆ.ಹನುಮಂತಪ್ಪ(ಬಳ್ಳಾರಿ ಜಿಲ್ಲೆಯ ಕಿರಗೋಡು ತಾಲೂಕಿನ ಮುಷ್ಟಘಟ್ಟ), ಕೆಂಜೋಡೆಪ್ಪ(ಯಾದಗಿರಿ ಜಿಲ್ಲೆಯ ಸುರಪೂರ ತಾಲೂಕಿನ ಮಾಲಹಳ್ಳಿ) ಅವರಿಗೆ ನೀಡಲಾಯಿತು.

ಶ್ರೇಷ್ಠ ಕೃಷಿ ಮಹಿಳಾ ಪ್ರಶಸ್ತಿಯನ್ನು ಜ್ಯೋತಿ(ಕಲಬುರಗಿ ಜಿಲ್ಲೆಯ ಚಿಂಚೋಳಿ), ಶಿಲ್ಪಾ(ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಹಾಲಹಿಪ್ಪರಗಾ), ವಿ.ಅನುಸೂಯಾ(ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಅಡವಿ ಆನಂದ), ನೀಲಮ್ಮ(ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮನ್ನಾಪೂರ), ಅನುಸೂಯಾ(ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕರಡಕಲ್), ರೇಣುಕಮ್ಮ(ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ವದ್ದಪ್ಪ), ರಾಧಾ(ಯಾದಗಿರಿ ಜಿಲ್ಲೆಯ ಶಹಪೂರ ತಾಲುಕಿನ ದೋರನಹಳ್ಳಿ) ಇವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೊಸರಾಜು, ಶಾಸಕರಾದ ಬಸನಗೌಡ ದದ್ದಲ್, ಹಂಪಯ್ಯ ನಾಯಕ, ಜಿ.ಕರೆಮ್ಮ, ಎಂಎಲ್ಸಿಗಳಾದ ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಶರಣಗೌಡ ಪಾಟೀಲ್ ಬಯ್ಯಪೂರ, ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಬಸನಗೌಡ ಬ್ಯಾಗವಾಟ, ಮಲ್ಲೇಶ ಕೊಲಮಿ, ಡಿ.ಮಲ್ಲಿಕಾರ್ಜುನ, ತಿಮ್ಮಣ್ಣ ಸೋಮಪ್ಪ ಚಾವಡಿ, ಡಿಸಿ ಕೆ.ನಿತೀಶ, ಎಸ್ಪಿ ಎಂ.ಪುಟ್ಟಮಾದಯ್ಯ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net