ಗಣೇಶ ಮೂರ್ತಿ ಮೆರವಣಿಗೆ ವೇಳೆ ಗಲಾಟೆ

lati
Published on

ರಾಯಚೂರು: ಐದನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಯುವಕರ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿ, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ನಗರದಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಗಾಜಗಾರಪೇಟೆ-ತಿಮ್ಮಾಪುರ ಪೇಟೆ ಮಾರ್ಗ ಮಧ್ಯೆ ನಗರೇಶ್ವರ ದೇವಸ್ಥಾನದ ಹತ್ತಿರ ಇರುವ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಗಣೇಶ ಮೆರವಣಿಗೆ ನಿಧಾನವಾಗಿ ಸಾಗುತ್ತಿರುವ ಕಾರಣಕ್ಕೆ ಎರಡು ಗುಂಪುಗಳ ಯುವಕರ ಮಧ್ಯೆ ಮಾತಿನ ಚಕಾಮಕಿ ನಡೆದಿದೆ.

ನಂತರ ಪರಿಸ್ಥಿತಿ ಹೊಡೆದಾಟದ ಹಂತಕ್ಕೆ ತಲುಪುತ್ತಿದ್ದಂತೆ ನೇತಾಜಿ ಪೊಲೀಸ್ ಠಾಣೆಯ ಪೊಲೀಸರು ಲಾಠಿ ಬೀಸಿ ಯುವಕರ ಗುಂಪನ್ನು ಚದುರಿಸಿದರು. ನಂತರ ಪರಿಸ್ಥಿತಿ ತಿಳಿಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net