ಒನಕೆಯಿಂದ ಹೊಡೆದು ವ್ಯಕ್ತಿಯ ಕೊಲೆ

Crime Logo
Published on

ರಾಯಚೂರು: ತಾಲೂಕಿನ ಗಿಲ್ಲೆಸುಗೂರು ಕ್ಯಾಂಪ್‌ನಲ್ಲಿರುವ ಮನೆಯಲ್ಲಿ ವ್ಯಕ್ತಿಯೊಬ್ಬನನ್ನು ಒನಕೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಸಂಜೆ ಜರುಗಿದೆ. ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ನರಸಿಂಹಲು (35) ಕೊಲೆಯಾದ ವ್ಯಕ್ತಿ. ತಿಂಗಳ ಹಿಂದೆಯಷ್ಟೇ ಗ್ರಾಮಕ್ಕೆ ಹಿಂತಿರುಗಿದ್ದ. ಪತ್ನಿ ಮಲ್ಲಮ್ಮ ಹೊಲದ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ. ಅನುಮಾನಾಸ್ಪದ ರೀತಿಯಲ್ಲಿ ಕೊಲೆ ನಡೆದಿದ್ದು, ಈ ಕುರಿತು ಪೊಲೀಸರು ನಾಲ್ವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net