ಅಂಗವಿಕಲರ ಸೌಲಭ್ಯಗಳು ಸದ್ಬಳಕೆಯಾಗಲಿ; ಜಿಪಂ ಸಿಇಒ ಶಶಿಧರ ಕುರೇರ ಸಲಹೆ

03122022 raichur Day of Disabled Persons
Published on

ರಾಯಚೂರು: ಅಂಗವಿಕಲರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಪ್ರಯೋಜನ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ ಸಲಹೆ ನೀಡಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ ಶನಿವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಅಂಗವಿಕಲರು ಸಮಾಜದಲ್ಲಿ ಉತ್ತಮ ರೀತಿ ಜೀವನ ನಡೆಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ 18 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸಲಾಗುತ್ತಿದ್ದು, ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಪ್ರತಿಯೊಬ್ಬರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net