ಗುರುಗಳ ಪರಿಶ್ರಮದಿಂದ ಸಾಧನೆ ಸಾಧ್ಯ

11092022 raichur teachers day
Published on

ರಾಯಚೂರು: ಜೀವನದಲ್ಲಿ ಉನ್ನತ ಸ್ಥಾನಕ್ಕೇರುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಸಮಾಜವನ್ನು ತಿದ್ದುವ ಶ್ರೇಷ್ಠ ವೃತ್ತಿ ಶಿಕ್ಷಕರದ್ದಾಗಿದೆ ಎಂದು ಶಾಸಕ ಬಸನಗೌಡ ದದ್ದಲ್ ಹೇಳಿದರು.

ಸ್ಥಳೀಯ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ಕಲಾ ಸಂಕುಲ ಸಂಸ್ಥೆಯಿಂದ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಒಬ್ಬ ವ್ಯಕ್ತಿ ಯಶಸ್ಸು ಸಾಧಿಸಬೇಕಾದರೆ ಅದರ ಹಿಂದೆ ಅದೆಷ್ಟೋ ಗುರುಗಳ ಪರಿಶ್ರಮವಿರುತ್ತದೆ. ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.

ಚಿತ್ರನಟಿ ಡಾ.ಪೂಜಾ ರಮೇಶ ಮಾತನಾಡಿ, ರಾಜ್ಯದಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ಅಭಿಯಾನವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net