

ರಾಯಚೂರು: ಗುರು ಪೂರ್ಣಿಮೆ ನಿಮಿತ್ತ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರನ್ನು ಟಿಟಿಡಿ ದಾಸ ಸಾಹಿತ್ಯ ಪ್ರಾಜೆಕ್ಟ್‌ನಿಂದ ಸೋಮವಾರ ಸನ್ಮಾನಿಸಿ, ಗೌರವ ವಂದನೆ ಸಲ್ಲಿಸಲಾಯಿತು.
ಇದನ್ನೂ ಓದಿ:
ಟಿಟಿಡಿ ದಾಸ ಸಾಹಿತ್ಯ ಪ್ರಾಜೆಕ್ಟ್ ವಿಶೇಷಾಧಿಕಾರಿ ಪಡಗಾಲ ಆನಂದತೀರ್ಥಾಚಾರ್ ಸ್ವಾಮೀಜಿಗಳಿಗೆ ಪುಷ್ಪಾರ್ಚನೆ ಮಾಡಿದರು. ಟಿಟಿಡಿಯಿಂದ ತರಲಾದ ಶೇಷ ವಸ್ತ್ರವನ್ನು ರಾಯರಿಗೆ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಭಜನಾ ಮಂಡಳಿಗಳ 3,500ಕ್ಕೂ ಹೆಚ್ಚು ಮಹಿಳೆಯರಿಂದ ಭಕ್ತಿ ಸಂಕೀರ್ತನೆ ನಡೆಯಿತು. ಇದಕ್ಕೂ ಮೊದಲು ಶ್ರೀಗಳು ತುಳಸಿ ವನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಮೃತ್ತಿಕೆಯನ್ನು ಸಂಗ್ರಹಿಸಿ ಮೆರವಣಿಗೆ ಮೂಲಕ ಶ್ರೀಮಠಕ್ಕೆ ತರಲಾಯಿತು.
ಮಠದ ವ್ಯವಸ್ಥಾಪಕ ಎಸ್.ಕೆ.ಶ್ರೀನಿವಾಸರಾವ್, ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ನಿವೃತ್ತ ಪ್ರಾಚಾರ್ಯ ಡಾ.ಎನ್.ವಾದಿರಾಜಾಚಾರ್, ಶ್ರೀಮಠದ ಸಿಬ್ಬಂದಿ ಉಪಸ್ಥಿತರಿದ್ದರು.