ನಕಲಿ ದಾಖಲೆ ಸೃಷ್ಠಿಸಿ ಅನುದಾನ ದುರ್ಬಳಕೆ: ಮೌನೇಶ್ ಆರೋಪ

Mounesh
ಮೌನೇಶ್
Published on

ರಾಯಚೂರು: ಅಮೃತ ಆರೋಗ್ಯ ಮೂಲ ಸೌಕರ್ಯಗಳ ಉನ್ನತೀಕರಣ ಯೋಜನೆಯಡಿ ಜಿಲ್ಲೆಯ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ದುರಸ್ತಿಗಾಗಿ ಮೀಸಲಿರಿಸಿದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ದಿದ್ದಿಗಿ ಗ್ರಾಮ ಘಟಕದ ಅಧ್ಯಕ್ಷ ಮೌನೇಶ್ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಸಿಂಧನೂರು ತಾಲೂಕಿನ ರಾಗಲಪರ್ವಿ, ಗಾಂಧಿನಗರ, ಮಸ್ಕಿ ತಾಲೂಕಿನ ಬಳಗನೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ದುರಸ್ತಿಗಾಗಿ ತಲಾ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 20 ಲಕ್ಷ ರೂ. ಅನುದಾನವನ್ನು ಅಮೃತ ಆರೋಗ್ಯ ಮೂಲಸೌಕರ್ಯಗಳ ಉನ್ನತಿಕರಣ ಯೋಜನೆಯಡಿ ನೀಡಲಾಗಿದೆ. ಆದರೆ ಈ ಕೇಂದ್ರಗಳಲ್ಲಿ ಯಾವುದೇ ದುರಸ್ತಿ ಕಾರ್ಯಗಳನ್ನು ಮಾಡದೇ ನಕಲಿ ದಾಖಲೆಗಳನ್ನು ಸೃಷ್ಠಿಸಿ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದರು.

ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ದೂರು ಸಲ್ಲಿಸಲಾಗಿದ್ದು ಆದರೆ ಈವರೆಗೂ ದೂರಿಗೆ ಸ್ಪಂಧಿಸುತ್ತಿಲ್ಲ. ಲೋಕಾಯುಕ್ತ ಪೊಲೀಸರಿಗೂ ದೂರು ಸಲ್ಲಿಸಲಾಗಿದೆ ಆದರೂ ಕ್ರಮ ಕೈಗೊಂಡಿಲ್ಲ ಕೂಡಲೇ ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಇಂದುಧರ್, ಲಿಂಗಪ್ಪ ಸೇರಿದಮತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net