ರಾಯಚೂರಲ್ಲಿ ಧಾರಾಕಾರ ಮಳೆ

050721 Raichur Heavy Rain
ರಾಯಚೂರಿನಲ್ಲಿ ಸೋಮವಾರ ಬೆಳಗ್ಗೆ ಧಾರಾಕಾರ ಮಳೆ ಸುರಿದ ಕಾರಣ ಗೋಶಾಲೆ ರಸ್ತೆಯಲ್ಲಿ ನೀರು ನಿಂತಿರುವುದು.
Published on

ರಾಯಚೂರು: ನಗರದಲ್ಲಿ ಸೋಮವಾರ ಬೆಳಗ್ಗೆ ಒಂದು ಗಂಟೆ ಕಾಲ ಧಾರಾಕಾರ ಮಳೆ ಸುರಿದು, ಪಟ್ಟಣದ ವಿವಿಧ ಬಡಾವಣೆಗಳ ರಸ್ತೆ ಮೇಲೆ ನೀರು ನಿಂತು, ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ನಗರ ಸೇರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸೋಮವಾರ ಮೋಡ ಕವಿದ ವಾತವರಣವಿದ್ದು, ಮುಂಜಾನೆ 10ಕ್ಕೆ ತೆಲಂಗಾಣ ಭಾಗದಿಂದ ದಟ್ಟ ಮೋಡ ಆವರಿಸಿ, ನಂತರ ಗುಡುಗು, ಸಿಡಿಲು ಸಹಿತ ರಭಸವಾಗಿ ಮಳೆ ಸುರಿಯಿತು. ಇದರಿಂದ ನಗರದ ಚರಂಡಿಗಳು ತುಂಬಿ ಹರಿದು, ರಸ್ತೆಗಳ ಮೇಲೆ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಚರಂಡಿಗಳ ನಿರ್ವಹಣೆ ಕೊರತೆ, ಅಸಮರ್ಪಕ ಕಸ ವಿಲೇವಾರಿಯಿಂದಾಗಿ ಈ ಸಮಸ್ಯೆ ಎದುರಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಸೋಮವಾರ ಸಂಜೆ ವರೆಗೆ ತಾಲೂಕಿನಲ್ಲಿ ಮೋಡ ಮುಸುಕಿದ ವಾತಾವರಣವಿತ್ತು. ಅಲ್ಲಲ್ಲಿ ತುಂತುರು ಮಳೆ ಸುರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net