ಬಸವಕಲ್ಯಾಣದಿಂದ ಬೆಂಗಳೂರಿನವರೆಗೆ ಪಾದಯಾತ್ರೆ; ಜನಾಂದೋಲನ ಮಹಾಮೈತ್ರಿ ಮುಖ್ಯಸ್ಥ ಎಸ್.ಆರ್.ಹಿರೇಮಠ ಮಾಹಿತಿ

07022022 SR Hiremath
Published on

ಕರಾಳ ಕಾಯ್ದೆ ವಾಪಸ್‌ಗಾಗಿ ಒತ್ತಾಯ

ರಾಯಚೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಬೆಂಬಲ ಬೆಲೆಯನ್ನು ಕಾಯ್ದೆ ಬದ್ಧ ಮಾಡಬೇಕು ಎಂದು ಒತ್ತಾಯಿಸಿ ಮಾ.1 ರಿಂದ 14ರ ವರೆಗೆ ಬೀದರ್‌ನ ಬಸವ ಕಲ್ಯಾಣದಿಂದ ಬೆಂಗಳೂರಿನವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನ ಮಹಾಮೈತ್ರಿ ಮುಖ್ಯಸ್ಥ ಎಸ್.ಆರ್.ಹಿರೇಮಠ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾ.1ರಂದು ಬೀದರ್‌ನ ಅನುಭವ ಮಂಟಪದಿಂದ ಜಾಥಾ ಆರಂಭವಾಗಲಿದ್ದು, ರಾಜ್ಯದ ಹಲವು ಜಿಲ್ಲೆಗಳ ಮೂಲಕ ಮಾ.14ರಂದು ಬೆಂಗಳೂರು ತಲುಪಲಿದೆ. ಪ್ರಮುಖ ನಗರಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಆಯಾ ಜಿಲ್ಲೆಯ ಇಬ್ಬರು ಶಾಸಕರನ್ನು ಆಹ್ವಾನಿಸಲಾಗುತ್ತಿದೆ. ಅದಕ್ಕೆ ಸ್ಪಂದನೆ ನೀಡದವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು. ಸಂಘಟನೆ ಪದಾಧಿಕಾರಿಗಳಾದ ಚಾಮರಸ ಮಾಲಿಪಾಟೀಲ್, ಭೀಮರಾಯ ಜರದಬಂಡಿ, ಜಾನ್‌ವೆಸ್ಲಿ, ಖಾಜಾ ಅಸ್ಲಂ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net