ಹಿಂದುಗಳ ಭಾವನೆಗಳಿಗೆ ಘಾಸಿ

091122 Raichur BJP Protest Hindhu Word
ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
Published on

ರಾಯಚೂರು: ಹಿಂದು ಪದ ಅಶ್ಲೀಲ ಸೂಚಕವಾಗಿದೆ ಎಂದು ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದ ಬಳಿ ಬಿಜೆಪಿ ಜಿಲ್ಲಾ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಜವಾಬ್ದಾರಿ ಸ್ಥಾನದಲ್ಲಿರುವ ಜಾರಕಿಹೊಳಿ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಹಿಂದುಗಳ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದಾರೆ. ಅಸಂಬಂದ್ಧ ಹೇಳಿಕೆ ಮೂಲಕ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿ ಮತಗಳಿಸುವ ಹುನ್ನಾರ ನಡೆಸಿದ್ದಾರೆ. ತೀವ್ರ ವಿರೋಧ ವ್ಯಕ್ತವಾದರೂ ಹೇಳಿಕೆಯನ್ನು ಹಿಂಪಡೆಯಲು ನಿರಾಕರಿಸುವ ಮೂಲಕ ಉದ್ಧಟತನ ತೋರುತ್ತಿರುವ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಕೆಪಿಸಿಸಿ ಅಧ್ಯಕ್ಷರು ಜಾರಕಿಹೊಳಿಯನ್ನು ಪಕ್ಷದಿಂದ ಉಚ್ಛಾಟಿಸಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net