ಹೂಗಾರ ಮಾದಯ್ಯ ಜಯಂತ್ಯುತ್ಸವ ಇಂದು

08102022 raichur amaresh hoogar
Published on

ರಾಯಚೂರು: ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ಮಧ್ಯಾಹ್ನ 1.30ಕ್ಕೆ ಶರಣ ಹೂಗಾರ ಮಾದಯ್ಯ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಹೂಗಾರ ಸಮಾಜದ ಗೌರವಾಧ್ಯಕ್ಷ ಅಮರೇಶ ಹೂಗಾರ ತಿಳಿಸಿದರು.

ಸ್ಥಳೀಯ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶನಿವಾರ ಬೆಳಗ್ಗೆ 8ಕ್ಕೆ ಕರ್ನಾಟಕ ಸಂಘದಿಂದ ಕುಂಭ, ಕಳಸ ಹಾಗೂ ಮಂಗಳವಾದ್ಯಗಳೊಂದಿಗೆ ಹೂಗಾರ ಮಾದಯ್ಯರ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ವೇದಿಕೆ ಕಾರ್ಯಕ್ರಮದಲ್ಲಿ ಹೂಗಾರ ಮಾದಯ್ಯ ಶಕ್ತಿಪೀಠದ ಗುರುರಾಜೇಂದ್ರ ಶಿವಯೋಗಿಗಳು ಸಾನ್ನಿಧ್ಯ ವಹಿಸಲಿದ್ದು, ಸಂಸದ ರಾಜಾ ಅಮರೇಶ್ವರ ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮುದಾಯದ ಜಿಲ್ಲಾಧ್ಯಕ್ಷ ಪ್ರೇಮ್ ಹೂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಅಧ್ಯಕ್ಷ ಬಸವರಾಜ ಹೂಗಾರ, ಪದಾಧಿಕಾರಿಗಳಾದ ನರಸಣ್ಣ ಪೂಜಾರಿ, ಸೂಗಪ್ಪ ಹೂಗಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net