ಹಾಸ್ಟೆಲ್ ಕಾರ್ಮಿಕರ ಕುಟುಂಬ ನಿರ್ವಹಣೆಗೆ ತೊಂದರೆ, ಸಂಘದ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ ಹೇಳಿಕೆ

Mahesh Chiklaparvi
ಮಹೇಶ ಚೀಕಲಪರ್ವಿ.
Published on

ರಾಯಚೂರು: ವಸತಿನಿಲಯಗಳ ಕಾರ್ಮಿಕರ ಬಾಕಿ ವೇತನ ಪಾವತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಫೆ.21ರಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ ತಿಳಿಸಿದರು.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು. ಜಿಲ್ಲೆಯ ವಸತಿ ನಿಲಯಗಳಲ್ಲಿ ಸುಮಾರು 550 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೆಚ್ಚುವರಿ ಕಾರ್ಮಿಕರಿದ್ದಾರೆ ಎಂದು ನೆಪ ಹೇಳಿ ಸಂಬಳ ಪಾವತಿ ಮಾಡಲಾಗುತ್ತಿಲ್ಲ. ಹೀಗಾಗಿ ಕೆಲಸಗಾರರಿಗೆ ಕುಟುಂಬ ನಿರ್ವಹಣೆ ಮಾಡಲು ಸಂಕಷ್ಟವಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯಗಳ ಕಾರ್ಮಿಕರಿಗೆ ಏಳು ತಿಂಗಳಿಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ನಿಲಯಗಳಲ್ಲಿ ನಾಲ್ಕು ತಿಂಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳ ಕಾರ್ಮಿಕರಿಗೆ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net