ಪತಿಯಿಂದ ಪತ್ನಿಯ ಕೊಲೆ

17102022 raichur murder
Published on

ರಾಯಚೂರು: ಪತಿಯೇ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ದಾರುಣ ಘಟನೆ ತಾಲೂಕಿನ ಏಗನೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮನೆಯೊಂದರಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದ್ದು, ಪಲ್ಲವಿ(32) ಎಂಬ ಮಹಿಳೆ ಮನೆಗೆಲಸದಲ್ಲಿದ್ದಾಗ ಮಹಿಳೆಯ ಪತಿ ಶಶಿಕುಮಾರ ಏಕಾಏಕಿ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಪಲ್ಲವಿ ಸುಂಕನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು, ಪತಿ ಶಶಿಕುಮಾರ ಖಾಸಗಿ ಕಂಪನಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂಬುವುದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಹೇಳಲಾಗುತ್ತಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net