ಕಾನೂನುಬಾಹಿರ ಕೃತ್ಯ ಎಸಗಿದರೆ ಕಠಿಣ ಕ್ರಮ; ಎಸ್ಪಿ ಬಿ.ನಿಖಿಲ್ ಎಚ್ಚರಿಕೆ

13022022 Raichur police march
Published on


ಕಾನೂನು ಸುವ್ಯವಸ್ಥೆಗಾಗಿ ಪೊಲೀಸರಿಂದ ಪಥ ಸಂಚಲನ

ರಾಯಚೂರು: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಇಲಾಖೆಯಿಂದ ಭಾನುವಾರ ಪಥ ಸಂಚಲನ ನಡೆಯಿತು.

ಎಸ್ಪಿ ಬಿ.ನಿಖಿಲ್ ಮಾತನಾಡಿ, ಜಿಲ್ಲೆಯಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪಥ ಸಂಚಲನ ಮೂಲಕ ನಾಗರಿಕರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ. ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net