ಒಳ ಮೀಸಲಾತಿ ಹೆಸರಲ್ಲಿ ದಾರಿ ತಪ್ಪಿಸುವ ಕೆಲಸ

m virupakshi
Published on

ರಾಯಚೂರು: ಚುನಾವಣೆ ಹೊಸ್ತಿಲಲ್ಲಿ ಒಳ ಮೀಸಲಾತಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ದ್ರೋಹ ಬಗೆಯುವ ಮೂಲಕ ರಾಜ್ಯ ಸರ್ಕಾರ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಪ್ರಯತ್ನ ನಡೆಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರೂಪಾಕ್ಷಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ರಾಜ್ಯ ಸರ್ಕಾರ ಪ್ರಕಟಿಸಿರುವ ಮೀಸಲಾತಿ ಹಂಚಿಕೆ ಅವೈಜ್ಞಾನಿಕವಾಗಿದ್ದು, 9ನೇ ಷೆಡ್ಯೂಲ್‌ನಲ್ಲಿ ಸೇರಿಸಿ ಸಂಸತ್ತಿನಲ್ಲಿ ಅಂಗೀಕರಿಸದೆ ಅದನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಆದರೂ, ಒಳ ಮೀಸಲಾತಿ ಹೆಸರಿನಲ್ಲಿ ದಲಿತರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಹಾಗೂ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲು ಹೆಚ್ಚಿಸಲು ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ಸರ್ಕಾರಕ್ಕೆ ವರದಿ ನೀಡಿವೆ. ಈ ಆಯೋಗದ ವರದಿಗಳನ್ನು ಅಂಗೀಕರಿಸದೆ ಯಾವ ಮಾನದಂಡಗಳ ಮೇಲೆ ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಹೇಳುತ್ತಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net