ಕೈಗಾರಿಕೆ ಹೆಸರಿನಲ್ಲಿ ಕೃಷಿ ಭೂಮಿ ಸ್ವಾಧೀನ

021122 Raichur Karnataka Provincial Farmers Association protest
ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
Published on

ರಾಯಚೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆಯನ್ನು ರದ್ದುಗೊಳಿಸಬೇಕು, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಿ, ಕಚೇರಿಯ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಲಾಯಿತು.

ಬಂಡವಾಳ ಹೂಡಿಕೆದಾರರ ಸಭೆ, ಕೈಗಾರಿಕಾ ಕಾರಿಡಾರ್ ಹೆಸರಿನಲ್ಲಿ ಸರ್ಕಾರ ಮತ್ತೊಂದು ದೊಡ್ಡ ಮಟ್ಟದಲ್ಲಿ ರೈತರ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ಕೋವಿಡ್, ಅತಿವೃಷ್ಟಿ, ಅನಾವೃಷ್ಟಿಯಿಂದ ಕಳೆದ ನಾಲ್ಕು ವರ್ಷಗಳಿಂದ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ರೈತರ ರಕ್ಷಣೆ ಬದಲು ರೈತರ ಭೂಮಿ, ವಿದ್ಯುತ್, ನೀರನ್ನು ಕಾರ್ಪೋರೇಟ್ ಕಂಪನಿಗಳಿಗೆ ಧಾರೆ ಎರೆಯಲು ಮುಂದಾಗಿದೆ. ಈಗಾಗಲೇ ಲ್ಯಾಂಡ್ ಬ್ಯಾಂಕ್, ಕೆಐಎಡಿಬಿ ಹೆಸರಿನಲ್ಲಿ ಲಕ್ಷಾಂತರ ಎಕರೆ ಕೃಷಿ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net