ಒಳಮೀಸಲಾತಿ ಜಾರಿ ಮಾಡದೇ ಕಾಲಹರಣ: ಶಿವರಾಯ ಅಕ್ಕರಕಿ

oplus_2
oplus_2
Published on

ರಾಯಚೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಅಧಿಕಾರ ವಹಿಸಿ ತೀರ್ಪು ನೀಡಿದ್ದರೂ ಸರ್ಕಾರ ಮೀಸಲಾತಿ ಜಾರಿಗೆ ಅನಗತ್ಯ ವಿಳಂಬ ಮಾಡುತ್ತಿದೆ ಎಂದು ಎಂಆರ್‌ಎಚ್‌ಎಸ್ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಚುನಾವಣೆ ಪೂರ್ವದಲ್ಲಿ ಹೇಳಿಕೊಂಡು ಇದೀಗ ಚುನಾವಣೆಯಲ್ಲಿ ಗೆದ್ದ ಬಳಿಕ ಪರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಕಾಲಹರಣ ಮಾಡುತ್ತಾ ಅನ್ಯಾಯ ಮಾಡುತ್ತಿದೆ ಎಂದರು.

ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ಅ.28ರಂದು ನಡೆಯಲಿದ್ದು, ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗಬೇಕು ಇಲ್ಲವಾದಲ್ಲಿ ಮುಂದೆ ನಡೆಯಲಿರುವ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ಮಾರೆಪ್ಪ, ಹೇಮರಾಜ್ ಅಸ್ಕಿಹಾಳ, ಆಂಜನೇಯ್ಯ ಕುರಬದೊಡ್ಡಿ, ಶ್ರೀನಿವಾಸ ಕೊಪ್ಪರ, ರಮೇಶ, ತಾಯಣ್ಣ, ನರಸಿಂಹಲು ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net