

ರಾಯಚೂರು: ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ಸರಿಯಲ್ಲ ಕೂಡಲೇ ಒಳಮೀಸಲಾತಿ ಜಾರಿಗೊಳಿಸಲು ಮುಂದಾಗಬೇಕು ಎಂದು ಒಳ ಮೀಸಲಾತಿ ಐಕ್ಯ ಹೋರಾಟ ಸಮಿತಿಯ ಸಂಚಾಲಕ ಎಂ.ವಿರೂಪಾಕ್ಷಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜ್ಯ ಸರ್ಕಾರದಿಂದ ಒಳಮೀಸಲಾತಿ ಜಾರಿಗೊಳಿಸದೇ ಕಾಲಹರಣ ಮಾಡಿದೆ. ಶೀಘ್ರವೇ ಮೀಸಲಾತಿ ಜಾರಿಗೊಳಿಸಲು ನಿರ್ಧಾರ ತೆಗೆದುಕೊಳ್ಳಬೇಕು ಇಲ್ಲದೇ ಹೋದಲ್ಲಿ ಮುಂದೆ ಬರುವ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲಾಗುವುದು ಎಂದರು.
ಸುಪ್ರೀಕೋರ್ಟ್ ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡಿದೆ. ಆದರೆ ಸುಪ್ರೀಂಕೋರ್ಟ್ ತೀರ್ಪಗೆ ಬೆಲೆ ಕೊಡದೇ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡುತ್ತಿದ್ದು, ಈಗಾಗಲೇ ಹರಿಯಾಣದಲ್ಲಿ ಒಳಮೀಸಲಾತಿ ಜಾರಿ ಮಾಡುವುದಾಗಿ ಅಲ್ಲಿನ ರಾಜ್ಯ ಸರ್ಕಾರ ಘೊಷಣೇ ಮಾಡಿದೆ. ಕರ್ನಾಟಕದಲ್ಲಿ ಮುಂದೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಕುರಿತು ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗದುಕೊಂಡು ಮೀಸಲಳಾತಿ ಜಾರಿ ಮಾಡಲು ಮುಂದಾಗಬೇಕು ಇಲ್ಲವಾದಲ್ಲಿ ಪ್ರತಿಭಟನೆಯ ಕಾವು ತೀವ್ರವಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ಮಾರೆಪ್ಪ, ರವೀಂದ್ರ ಜಲ್ದಾರ್, ಜೆ.ಬಿ ರಾಜು, ಹೇಮರಾಜ್ ಅಸ್ಕಿಹಾಳ, ಸುಭಾಷ್, ಭೀಮಣ್ಣ ಮಂಚಾಲ, ತಿಮ್ಮಪ್ಪ ಪಿರಂಗಿ, ಸತೀಶ್ ಸೇರಿದಂತೆ ಇತರರಿದ್ದರು.