ಕಲಾ ಸಂಕುಲದಿಂದ ಶಿಕ್ಷಕರ ದಿನಾಚರಣೆ 11ಕ್ಕೆ

Maruthi Badiger Kalasankula Raichur
ಮಾರುತಿ ಬಡಿಗೇರ.
Published on

ರಾಯಚೂರು: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೆ.11ರ ಬೆಳಗ್ಗೆ 10ಕ್ಕೆ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಲಾ ಸಂಕುಲ ಸಂಸ್ಥೆ ಕಾರ್ಯದರ್ಶಿ ಮಾರುತಿ ಬಡಿಗೇರ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಾವಿದ ಗೋಪಿಯಿಂದ ಮಿಮಿಕ್ರಿ ಹಾಗೂ ಗಾಯನ, ನಟಿ ಪೂಜಾ ರಮೇಶರ ಸಿನಿಮಾ ಪೋಸ್ಟರ್ ಬಿಡುಗಡೆ ಮಾಡಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ರಾಜ್ಯದ ವಿವಿಧ ಜಿಲ್ಲೆಗಳ 30 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಸಂಸದ ರಾಜಾ ಅಮರೇಶ್ವರ ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಬಸನಗೌಡ ದದ್ದಲ್ ಸೇರಿ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಪದಾಧಿಕಾರಿಗಳಾದ ಅಮರೇಗೌಡ, ಮೌನೇಶ ಗೋನಾಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net