ಹೈಕೋರ್ಟ್ ಪೀಠದ ಆದೇಶ ಪಾಲಿಸಿ; ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಒತ್ತಾಯ

15112021 Raichur Dr Ambedkar Peoples Party protest
Published on

ನಾಯಕ, ವಾಲ್ಮೀಕಿ, ಬೇಡ, ಬೇಡರ್ ಜಾತಿಗಳನ್ನು ಅನುಸೂಚಿತ ಬುಡಕಟ್ಟು ಪಟ್ಟಿಯಿಂದ ಕೈಬಿಡಲು ಮನವಿ

ರಾಯಚೂರು: ಕಲಬುರಗಿ ಹೈಕೋರ್ಟ್ ಪೀಠದ ಆದೇಶದಂತೆ ನಾಯಕ, ವಾಲ್ಮೀಕಿ, ಬೇಡ, ಬೇಡರ್ ಜಾತಿಗಳನ್ನು ಅನುಸೂಚಿತ ಬುಡಕಟ್ಟು ಪಟ್ಟಿಯಿಂದ ಕೈಬಿಡುವಂತೆ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ, ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿತು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜು.2ರಂದು ತೀರ್ಪು ನೀಡಿದೆ. ನಾಯಕ, ವಾಲ್ಮೀಕಿ, ಬೇಡ, ಬೇಡರ್ ಜಾತಿಗಳನ್ನು ಅನುಸೂಚಿತ ಬುಡಕಟ್ಟಿ ಪಟ್ಟಿಯಲ್ಲಿ ಸೇರಿಸಿರುವುದು ತಪ್ಪು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ಈ ತೀರ್ಪಿಗೆ ಸಂಬಂಧಪಟ್ಟಂತೆ ಮೇಲ್ಮನವಿ ಕೂಡ ಸಲ್ಲಿಕೆಯಾಗಿಲ್ಲ. ಹೈಕೋರ್ಟ್ ಆದೇಶ ನೀಡಿ ಮೂರ‌್ನಾಲ್ಕು ತಿಂಗಳಾದರೂ ಜಾರಿಗೊಳಿಸದೆ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net