ಅದ್ದೂರಿಯಾಗಿ ಜರುಗಿದ ಕಲ್ಮಲಾ ಕರಿಯಪ್ಪ ತಾತ ಜಾತ್ರೆ ರಥೋತ್ಸವ

Kalmala jatre
ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕರಿಯಪ್ಪ ತಾತ ದೇವಸ್ಥಾನದಲ್ಲಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
Published on

ರಾಯಚೂರು: ತಾಲೂಕಿನ ಕಲ್ಮಲಾ ಗ್ರಾಮದ ಶ್ರೀ ಕರಿಯಪ್ಪ ತಾತ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಕರಿಯಪ್ಪ ತಾತ ರಥೊತ್ಸವವು ಶುಕ್ರವಾರ ಅದ್ದೂರಿಯಾಗಿ ಜರುಗಿತು.
ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು ನಾಗರ ಪಂಚಮಿ ಹಿನ್ನೆಲೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕರಿಯಪ್ಪ ತಾತನ ದರ್ಶನ ಪಡೆದು ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಾರ್ಥಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net