ಶಿಕ್ಷಣದಿಂದ ದೇಶಕ್ಕೆ ಕೀರ್ತಿ ತನ್ನಿ

011122 Raichur Sagamakunta Rajyothsava
ರಾಯಚೂರು ತಾಲೂಕಿನ ಸಗಮಕುಂಟಾ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯ ನಾಲ್ಕು ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಉದ್ಘಾಟಿಸಿದರು.
Published on

ರಾಯಚೂರು: ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯಾಗಬೇಕಾಗಿದ್ದು, ಶೈಕ್ಷಣಿಕ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಅನುದಾನ ಮೀಸಲಿಡಲಾಗುತ್ತದೆ. ಆದ್ದರಿಂದ ಸರ್ಕಾರಿ ಶಾಲೆ ಮಕ್ಕಳು ಉತ್ತಮ ಶಿಕ್ಷವನ್ನು ಪಡೆದು ಜಿಲ್ಲೆ ಹಾಗೂ ದೇಶಕ್ಕೆ ಕೀರ್ತಿ ತರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.

ತಾಲೂಕಿನ ಸಗಮಕುಂಟಾ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ ಒಂದು ಕೋಟಿ ರೂ.ಅಂದಾಜು ವೆಚ್ಚದ ಸರ್ಕಾರಿ ಪ್ರೌಢ ಶಾಲೆಯ ನಾಲ್ಕು ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮಸ್ಥರ ಸಹಕಾರದಿಂದ ಗ್ರಾಮದ ಶಾಲೆಗೆ ಹೆಚ್ಚುವರಿ ಕೊಠಡಿಗಳನ್ನು ನೀಡಲಾಗಿದ್ದು, ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಪ್ರಧಾನ ಮಂತ್ರಿಗಳ ದೂರದೃಷ್ಟಿಯಿಂದ ದೇಶದಲ್ಲಿ ಶೈಕ್ಷಣಿಕ ಬೆಳವಣಿಗೆಯಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net