

ರಾಯಚೂರು: ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಅಭಿಯಾನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆಗೊಂಡ ಕನ್ನಡ ಜ್ಯೋತಿ ರಥಯಾತ್ರೆಯು ಇದೇ ಅ.16ರಂದು ರಾಯಚೂರು ಜಿಲ್ಲೆಗೆ ಪ್ರವೇಶಿಸಲಿದೆ ಎಂದು ಡಿಸಿ ಕೆ.ನಿತೀಶ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೈಸೂರು ರಾಜ್ಯವು ಕರ್ನಾಟಕವೆಂದು ಮರು ನಾಮಕರಣವಾಗಿ 2023ರ ನ.1ಕ್ಕೆ 50ವರ್ಷ ಪೂರ್ಣಗೊಂಡ ಶುಭ ಸಂದರ್ಭಕ್ಕೆ ಸಿಎಂ, ಕಳೆದ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಸಂಭ್ರಮ-50 ಘೋಷಿಸಿದ್ದರು. ಅದರಡಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅದರ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆ ಜಿಲ್ಲೆಗೆ ಆಗಮಿಸಲಿದೆ.
ರಥಯಾತ್ರೆಯನ್ನು ಜಾನಪದ ಕಲಾತಂಡಗಳೊAದಿಗೆ ಸ್ವಾಗತಿಸಿ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು, ಸ್ತ್ರೀಶಕ್ತಿ ಸಂಘಟನೆಗಳು ಸೇರಿದಂತೆ ಇನ್ನಿತರೆ ಸಂಸ್ಥೆಗಳು ಭಾಗವಹಿಸಲಿದ್ದು, ಅ.16ರಂದು ಜಿಲ್ಲೆಯ ಲಿಂಗಸೂಗೂರು ತಾಲೂಕಿಗೆ ಬಂದು ತಲುಪಲಿದ್ದು, ಲಿಂಗಸೂಗೂರು ಪಟ್ಟಣದಲ್ಲಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳು. ರೈತಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾಸಂಸ್ಥೆಗಳು, ರೋಟರಿ ಕ್ಲಬ್, ಸ್ತ್ರೀ ಶಕ್ತಿ ಸಂಘಗಳು ಸೇರಿದಂತೆ ಇನ್ನಿತರೆ ಎಲ್ಲಾ ಕನ್ನಡ ಪರ ಸಂಘ-ಸAಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಕನ್ನಡ ರಥಕ್ಕೆ ಭವ್ಯ ಸ್ವಾಗತ ಕೋರಲಿದ್ದಾರೆ.
ನಂತರ ದೇವದುರ್ಗ ಮಾರ್ಗವಾಗಿ ರಾಯಚೂರು ನಗರಕ್ಕೆ ರಾತ್ರಿ 09ಗಂಟೆಗೆ ಆಗಮಿಸಲಿದ್ದು, ತಹಶೀಲ್ದಾರ ಅವರು ಭವ್ಯ ಸ್ವಾಗತ ಕೋರಿಲಿದ್ದಾರೆ. ಅ.17ರ ಬೆಳಗ್ಗೆ 08ಗಂಟೆಗೆ ಮಾನವಿ, ಸಿರವಾರ, ಮಸ್ಕಿ ಹಾಗೂ ಸಿಂಧನೂರು ಮೂಲಕ ಜಿಲ್ಲೆಯಿಂದ ಬೀಳ್ಕೊಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.