ಕಿತ್ತೂರು ರಾಣಿ ಚನ್ಮಮ್ಮಗೆ ನಮನ; ಜಯಂತಿ ಸರಳ ಆಚರಣೆ

23102022 Raichur kittur rani chennama jayanti
Published on

ರಾಯಚೂರು: ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ನಗರದಲ್ಲಿ ರಾಣಿ ಚನ್ನಮ್ಮ ಭಾವಚಿತ್ರ ಮೆರವಣಿಗೆಯನ್ನು ವಿಧಾನ ಸಭೆ ಉಪ ಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ ನಿಧನರಾದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಯಿತು.

ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಣಿ ಚನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಲಾಯಿತು. ತಹಸೀಲ್ದಾರ್ ರಾಜಶೇಖರ, ಡಿಎಚ್‌ಒ ಡಾ.ಸುರೇಂದ್ರಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪೂರ, ಶಿಕ್ಷಕಿ ದಾನಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net