ಕುಸ್ಮಾದಿಂದ ಶಿಕ್ಷಕರ ದಿನಾಚರಣೆ

DK Muralidhar Raichur
ಡಿ.ಕೆ.ಮುರಳೀಧರ.
Published on

ರಾಯಚೂರು: ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸೆ.24ರ ಬೆಳಗ್ಗೆ 9ಕ್ಕೆ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ಡಿ.ಕೆ.ಮುರಳೀಧರ ತಿಳಿಸಿದರು.

ಒಕ್ಕೂಟದಲ್ಲಿ ನೋಂದಣಿಯಾಗಿರುವ ಪ್ರತಿಯೊಂದು ಶಾಲೆಯಿಂದ ಒಬ್ಬ ಶಿಕ್ಷಕಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ಮುಸ್ಲಿಂ ಧರ್ಮ ಗುರು ಮೌಲಾನಾ ಮಹಬೂಬ್ ಅಲಂ ಸಾಬ್, ಕ್ರೈಸ್ತ ಧರ್ಮಗುರು ವೈ.ಎಸ್.ಲಿಯೋಮೈಕಲ್ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ರಾಜಾ ಅಮರೇಶ್ವರ ನಾಯಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಒಕ್ಕೂಟದ ಅಧ್ಯಕ್ಷ ಎಸ್.ಎಲ್.ಕೇಶವರೆಡ್ಡಿ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಡಾ.ಶಿವರಾಜ ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಬಸನಗೌಡ ದದ್ದಲ್, ಮಾಜಿ ಎಂಎಲ್ಸಿ ಎನ್.ಎಸ್.ಬೋಸರಾಜು, ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ, ಸದಸ್ಯ ಜಯಣ್ಣ, ಆರ್‌ಡಿಎ ಅಧ್ಯಕ್ಷ ತಿಮ್ಮಪ್ಪ ನಾಡಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಒಕ್ಕೂಟದ ಅಧ್ಯಕ್ಷ ಎಸ್.ಎಲ್.ಕೇಶವರೆಡ್ಡಿ, ಪದಾಧಿಕಾರಿಗಳಾದ ಚಂದ್ರಕಾಂತ ಮನೊಳ್ಳಿ, ಹನುಮಂತಪ್ಪ ಯಾದವ, ಎಂ.ಸುರೇಶ ಭವಾನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net