ಕಾರ್ಮಿಕ, ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಿರಿ: ಕೆ.ಜಿ.ವೀರೇಶ

IMG-20241122-WA0005
Published on

ರಾಯಚೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ, ಕಾರ್ಮಿಕ ಹಾಗೂ ಜನ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಹಾಗೂ ಅಖಿಲ ಭಾರತ ಜಂಟಿ ಕಾರ್ಮಿಕ ಸಂಘಟನೆಗಳ ವೇದಿಕೆಯಿಂದ ರಾಯಚೂರಿನಲ್ಲಿ ನ.26ರಂದು ಎಚ್ಚರಿಕಾ ರ‌್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕದ ಜಿಲ್ಲಾ ಸಂಚಾಲಕ ಕೆ.ಜಿ ವೀರೇಶ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಮತ್ತೆ ಮುಂದುವರೆಸಿದ್ದು, ಕೂಡಲೇ ಕಾರ್ಮಿಕ, ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು ಒತ್ತಾಯಿಸಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಗಾಂಧಿ ಪುತ್ಥಳಿ ಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ‌್ಯಾಲಿ ನಡೆಸಲಾಗುತ್ತದೆ ಎಂದರು.

ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಪರವಾದ ನೀತಿಗಳನ್ನು ಹಾಗೂ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದು, ಇದರಿಂದ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯದಲ್ಲಿ ರದ್ದುಪಡಿಸುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆ ನೀಡಿ ಇದೀಗ ಸುಮ್ಮನಾಗಿದೆ. ರೈತರ ಹಾಗೂ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸಲು ಸರ್ಕಾರಗಳು ಮುಂದಾಗಬೇಕು ಇಲ್ಲವಾದಲ್ಲಿ ಪ್ರತಿಭಟನೆ ತೀವ್ರತೆ ಪಡೆದುಕೊಳ್ಳಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕರಿಯಪ್ಪ ಅಚ್ಚೊಳ್ಳಿ, ಶ್ರೀನಿವಾಸ, ಮಲ್ಲನಗೌಡ, ಖಾಜಾ ಅಸ್ಲಂ, ಆಂಜನೇಯ್ಯ, ಮಹೇಶ, ಶರಣಬಸವ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net