ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಣಿಯಾಗಲಿ

Raichur Eshanya Padavi Kshtra
ರಾಯಚೂರಿನ ಜಿ.ಪಂ. ಸಭಾಂಗಣದಲ್ಲಿ ಆಯೋಜಿಸಿದ್ದ ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಮಾತನಾಡಿದರು.
Published on

ರಾಯಚೂರು: ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸೇರಿ ಅನೇಕ ವಲಯಗಳಲ್ಲಿ ವೈವಿಧ್ಯ ಕಾಣಬಹುದು. ಆದರೆ ಮತದಾನದಲ್ಲಿ ವಿಚಾರದಲ್ಲಿ ಪ್ರತಿಯೊಬ್ಬರಲ್ಲಿ ಏಕತೆ ಇದ್ದು, ಮತದಾನ ಹಕ್ಕಿನಿಂದ ಯಾರೂ ದೂರ ಉಳಿಯಂತೆ ನೋಡಿಕೊಳ್ಳಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.

ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಗುರುವಾರ ಮಾತನಾಡಿದರು. ಮತದಾರರ ನೋಂದಣಿ ಯಶಸ್ವಿಯಾದರೆ ಚುನಾವಣೆ ಪ್ರಕ್ರಿಯೆಯಲ್ಲಿ ಯಶಸ್ಸು ಕಾಣಲು ಸಾಧ್ಯ.

ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಣಿ ಮಾಡಿಸುವುದು ಹಾಗೂ ಮತದಾನದ ಕುರಿತು ಮಾಹಿತಿ ರವಾನಿಸಲು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಮತದಾರರ ನೋಂದಣಿ ಅಭಿಯಾನದ ತರಬೇತುದಾರ ಸದಾಶಿವಪ್ಪ ಮಾತನಾಡಿ, ಮತದಾರರ ನೋಂದಣಿಗೆ ನ.6 ನೋಂದಣಿಗೆ ಕೊನೆಯ ದಿನವಾಗಿದೆ ಎಂದು ತಿಳಿಸಿ, ನೋಂದಣಿ ಪ್ರಕ್ರಿಯೆಗೆ ಅನುಸರಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net